ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಕೇಂದ್ರ ಸರ್ಕಾರವು ಫೆಬ್ರವರಿ 2019 ರಲ್ಲಿ ಜಾರಿಗೆ ತಂದಿದ್ದು, ಸದರಿಯು ದೇಶಾದ್ಯಂತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಣಕಾಸಿನ ನೆರವು ನೀಡುವ ನಿಟ್ಟಿನಲ್ಲಿ ಜಾರಿಗೆ ತರಲಾಯಿತು. ಸದರಿ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕವಾಗಿ ಒಟ್ಟು ರೂ.6,000 ದಂತೆ ಮೂರು ಕಂತುಗಳಲ್ಲಿ ತಲಾ ರೂ.2,000, ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಪ್ರಸ್ತುತ ಯೋಜನೆಯು ರೈತರ ಆದಾಯವನ್ನು ಬೆಂಬಲಿಸುವ ನಿಟ್ಟಿನಲ್ಲಿ ಮತ್ತು ಅವರ ಕೃಷಿ ವೆಚ್ಚಗಳನ್ನು ಪೂರೈಸಲು ಅನುಕೂಲದಾಯಕವಾಗುವ ಗುರಿಯಲ್ಲಿ ಜಾರಿಗೆ ತರಲಾಯಿತು.
ಫೆಬ್ರವರಿ 27, 2023 ರಂದು,ದೇಶಾದ್ಯಂತ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ 13ನೇ ಕಂತಿನ ಮೊತ್ತವನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (PM-KISAN) ಡೈರೆಕ್ಟ್ ಬೆನಿಫಿಟ್ ಟ್ರಾಂಸ್ವರ್ (DBT) ಮೂಲಕ 80 ದಶ ಲಕ್ಷಕ್ಕೂ ಹೆಚ್ಚು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪ್ರಧಾನ ಮಂತ್ರಿ ಮಾನ್ಯಶ್ರೀ ನರೇಂದ್ರ ಮೋದಿಯವರು ವರ್ಗಾಯಿಸಿರುತ್ತಾರೆ. ಇದರಲ್ಲಿ 2.5 ಲಕ್ಷ ಕೋಟಿ ಸಣ್ಣ ರೈತರು ಸೇರಿದ್ದು, ಇವರಲ್ಲಿ ರೂ.50,000 ಕೋಟಿ ಸಹೋದರಿಯರ ಮತ್ತು ತಾಯಂದಿರ ಖಾತೆಗಳಿಗೆ ಜಮಾ ಮಾಡಲಾಗಿದೆ. 2014ನೇ ಸಾಲಿನಲ್ಲಿ ಕೃಷಿ ಕ್ಷೇತ್ರಕ್ಕೆ ಮೀಸಲಾದ ಅನುದಾನ ರೂ.25000 ಕೋಟಿಯಿಂದ ಪ್ರಸಕ್ತ ಸಾಲಿನಲ್ಲಿ ರೂ. 1.25 ಲಕ್ಷ ಕೋಟಿಗೆ ಏರಿಕೆ ಮಾಡಲಾಗಿದೆ. ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಸಹಾಯವನ್ನು ಒದಗಿಸಲು ಸರ್ಕಾರವು ಪ್ರಧಾನ ಮಂತ್ರಿ ಪ್ರಣಾಮ್ ಯೋಜನೆಯನ್ನು ಪ್ರಾರಂಭಿಸಿದೆ.
ಕೇಂದ್ರ ಕೃಷಿ ಸಚಿವರಾದ ಮಾನ್ಯಶ್ರೀ ನರೇಂದ್ರ ಸಿಂಗ್ ತೋಮರ್ ರವರು ಪ್ರಸ್ತುತ ಸಂದರ್ಭದಲ್ಲಿ ಮಾತನಾಡಿ, ರೈತರ ಜೀವನ ಸುಧಾರಣೆಯಲ್ಲಿ ಪ್ರಧಾನ ಮಂತ್ರಿಯವರ ಪ್ರಯತ್ನವನ್ನು ಶ್ಲಾಘಿಸಿ, ರೈತರಿಗೆ ಅನುಕೂಲವಾಗುವಂತಹ ಯೋಜನೆಗಳು ವಿಶ್ವದ ಯಾವುದೇ ದೇಶಗಳಲ್ಲಿಲ್ಲ ,ಕಂಡು ಬರುವುದಿಲ್ಲ ಎಂದು ಸಾರಿದರು. ಮುಂದೂವರಿದು ಮಾತನಾಡುತ್ತಾ ಪಿಎಂ–ಕಿಸಾನ್ ಯೋಜನೆಯು ರೈತರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸಹಾಯ ಮಾಡುವುದರ ಜೊತೆಗೆ ಅವರ ಜೀವನ ಸಾಗಿಸುವಲ್ಲಿ ಕೊಡುಗೆ ನೀಡಿದೆ ಎಂದು ಹೇಳಿದರು. ಜೊತೆಗೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಹಾಗೂ ಮುಂಬರುವ ದಿನಗಳಲ್ಲಿ ರೈತರ ನೆರವಿಗೆ ಇನ್ನೂ ಹೆಚ್ಚಿನ ಸಹಾಯಮಾಡಲಾಗುತ್ತದೆ ಎಂದರು.
ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಕೃಷಿ ಸಚಿವರು ಯೋಜನೆಗಳ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಂಡ ಸಲುವಾಗಿ ರೈತರಿಗೆ ಧನ್ಯವಾದ ಅರ್ಪಿಸಿದರು, ಜೊತೆಗ ರೈತರ ಆದಾಯವು ಹಂತ ಹಂತವಾಗಿ ಹೆಚ್ಚಾಗುತ್ತಿರುವುದನ್ನು ಗಮನಿಸಿ ಸಂತೋಷವನ್ನು ವ್ಯಕ್ತಪಡಿಸಿದರು. ಇತ್ತೀಚಿನ ಕೃಷಿ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದ್ದು, ರೂ.4 ಲಕ್ಷ ಕೋಟಿಗಳ ಕೃಷಿ ರಫ್ತಿನ ದಾಖಲೆಯಿದೆ. ಭಾರತವು ಆಹಾರ ಧಾನ್ಯಗಳಲ್ಲಿ ಸ್ವಾವಲಂಬಿಯಾಗುವುದರೊಂದಿಗೆ ಜಾಗತಿಕ ಕೃಷಿ ಉತ್ಪಾದನೆಯಲ್ಲಿ ಮೊದಲನೇಯ ಅಥವಾ ಎರಡನೇಯ ಸ್ಥಾನದ ಪೈಪೋಟಿಯಲ್ಲಿ ನಿಲ್ಲುತ್ತಾ, ಸರ್ಕಾರದ ಪ್ರಯತ್ನಗಳ ಫಲಿತಾಂಶವನ್ನು ದೇಶವು ಮೆಚ್ಚಿಗೆ ವ್ಯಕ್ತಪಡಿಸಿದೆ. ಒಟ್ಟಿನಲ್ಲಿ ಸಣ್ಣ ರೈತರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮತ್ತು ದೇಶಾದ್ಯಂತ ಕೃಷಿಯನ್ನು ಪರಿವರ್ತಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತದೆ.
ಕೃಷಿಯಲ್ಲಿ, ದಕ್ಷತೆ ಮತ್ತು ಉತ್ಪಾದಕತೆ ಯಾವಾಗಲೂ ಮುಖ್ಯವಾಗಿರುತ್ತದೆ. ಈಗ ನಾವು ನಿಮಗೆ ನಿಮ್ಮ ನೀರಿನ ಸ್ಥಿತಿ, ನಿಮ್ಮ ಸಸ್ಯ ಸಂರಕ್ಷಣಾ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ…
ಇತ್ತೀಚಿನ ಆಧುನಿಕ ಕೃಷಿಯಲ್ಲಿ ಸಮರ್ಥ ನೀರಿನ ನಿರ್ವಹಣೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ಹನಿ ನೀರಾವರಿ ಪದ್ದತಿಯು ನೇರವಾಗಿ ಬೇರುಗಳ ವಲಯವನ್ನು ಗುರಿಯಾಗಿಸಿಕೊಂಡು ಸಸ್ಯಗಳಿಗೆ ನೀರನ್ನು ತಲುಪಿಸುವ ವಿಧಾನವನ್ನು…
ಸುಸ್ಥಿರ ಕೃಷಿ ಪದ್ದತಿಯಲ್ಲಿ ಸರಳವಾದ ಆದರೆ ಆಳವಾದ ವಿಷಯವೇನೆಂದರೆ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವುದು. ಸಾವಯವ ಕೃಷಿ ತ್ಯಾಜ್ಯವು ನಮಗೆ ಹೊರೆಯಾಗಿರದೆ ಮಣ್ಣನ್ನು ಸಮೃದ್ಧಗೊಳಿಸುವ, ಸಸ್ಯಗಳನ್ನು ಪೋಷಿಸುವ ಮತ್ತು…
ಇತ್ತೀಚೆಗೆ ಬದಲಾಗುತ್ತಿರುವ ಕೃಷಿ ಭೂದೃಶ್ಯದ ಕಾರಣವಾಗಿ, ಸಮರ್ಥನೀಯ ಮತ್ತು ಸಮರ್ಥ ಕೃಷಿ ವಿಧಾನಗಳನ್ನು ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ಪರಿಚಯಿಸುತ್ತಿದ್ದೇವೆ, ಎಪಿಸೆಲ್! ಎಕ್ಸೆಲ್ ಇಂಡಸ್ಟ್ರೀಸ್ ರವರ ಈ ನವೀನ…
ನೀರು ಕೃಷಿಯಲ್ಲಿ ಮೂಲಭೂತ ಸಂಪನ್ಮೂಲವಾಗಿದ್ದು, ಬೆಳೆಗಳ ವೃದ್ಧಿಗಾಗಿ ಅಗತ್ಯ ಪೋಷಕಾಂಶಗಳ ಮತ್ತು ಬೆಳೆ ರಕ್ಷಣೆಗೆ ಅಗತ್ಯವಾದ ರಾಸಾಯನಿಕಗಳನ್ನು ಸಾಗಿಸುವಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ . ಆದಾಗ್ಯೂ, ಕಳೆನಾಶಕಗಳು, ಕೀಟನಾಶಕಗಳು,…
ಹನಿ ನೀರಾವರಿ ವ್ಯವಸ್ಥೆ ಆಧುನಿಕ ಕೃಷಿಯ ಅತ್ಯಗತ್ಯ ಅಂಶವಾಗಿದೆ. ಇದು ಸಸ್ಯಗಳ ಬೇರುಗಳಿಗೆ ನೇರವಾಗಿ ನೀರನ್ನು ತಲುಪಿಸುವ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಈ ವಿಧಾನವು ನೀರನ್ನು ಸಂರಕ್ಷಿಸುವುದು…