Govt for Farmers

ಸಾಗರ ಪರಿಕ್ರಮ ಹಂತ III – ಮೀನುಗಾರಿಕಾ ವಲಯವನ್ನು ಉತ್ತೇಜಿಸಲು, ಕರಾವಳಿ ಸಮುದಾಯಗಳ ಏಳಿಗೆಗಾಗಿ ಸರ್ಕಾರದ ಪ್ರಯತ್ನಗಳನ್ನು ಸಾರುತ್ತದೆ.

ಸಾಗರ ಪರಿಕ್ರಮ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರದ ಮೀನುಗಾರಿಕೆ ಇಲಾಖೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದದಿಂದ, ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅನುಷ್ಠಾನ ಮಾಡಲಾಗಿದ್ದು, ಸದರಿಯು ಸ್ವಾತಂತ್ರ್ಯದ 75 ನೇ ವರ್ಷವನ್ನು ಸ್ಮರಿಸುತ್ತದೆ. ಪ್ರಸ್ತುತ ಕಾರ್ಯಕ್ರಮವು ಕರಾವಳಿ ಸಮುದಾಯಗಳ ಭಾವನೆಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ಕರಾವಳಿ ಪ್ರದೇಶದ ಸಂಪತ್ತಿನ ಬಗ್ಗೆ ಅರಿತುಕೊಳ್ಳುವ ನಿಟ್ಟಿನಲ್ಲಿದೆ. ಸಾಗರ ಪರಿಕ್ರಮದ ಮೂರನೇ ಹಂತವು ಪ್ರಸ್ತುತ ಸಾಲಿನ ಫೆಬ್ರವರಿ 19 ರಿಂದ 21 ರವರೆಗೆ ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ನಡೆದಿದ್ದು, ಮುಂಬೈನ ಸಾಸನ್ ಡಾಕ್‌ನಲ್ಲಿ ಮುಕ್ತಾಯವಾಯಿತು.

ಅವಲೋಕನ

ಕಾರ್ಯಕ್ರಮದಲ್ಲಿ ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಪುರಶೋತ್ತಮ್ ರೂಪಾಲಾರವರು ಕರಾವಳಿ ಸಮುದಾಯಗಳೊಂದಿಗೆ ಸಂವಾದ ನಡೆಸಿ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಜೊತೆಗೆ ಮೀನುಗಾರಿಕಾ ವಲಯದಲ್ಲಿ ಇಪ್ಪತ್ತು ಸಾವಿರ ಕೋಟಿ ಹೂಡಿಕೆ ಮಾಡುವ ಮುಂದಾಲೋಚನೆಯೊಂದಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಆಯೋಜಿಸಲಾಗಿದ್ದು, ಜೊತೆಗೆ ಮೀನುಗಾರಿಕಾ ವಲಯದ ಕಲ್ಯಾಣಕ್ಕಾಗಿ ಸರ್ಕಾರ ಮಾಡಿರುವ ವಿವಿಧ ನಿಬಂಧನೆಗಳ ಕುರಿತು ಚರ್ಚಿಸಲಾಯಿತು. ಮೀನುಗಾರಿಕೆ ಮೂಲಭೂತಸೌಕರ್ಯವನ್ನು ಪ್ರಸ್ತುತ ಯೋಜನೆಯ ಮುಖಾಂತರ ಬಲಪಡಿಸಲಾಗಿದೆ ಹಾಗೂ ಸಹಕಾರಿ ಕ್ಷೇತ್ರಕ್ಕೆ ಪ್ರತ್ಯೇಕವಾಗಿ ಸ್ವಾತಂತ್ರವನ್ನು ನೀಡಿ, ಸದರಿಯವರ ಮೂಲಕ ಮೀನುಗಾರಿಕೆ ಕ್ಷೇತ್ರವನ್ನು ಬಲಪಡಿಸಲು ಸ್ಥಾನಮಾನವನ್ನು ನೀಡಲಾಗಿದೆ. ಮೀನುಗಾರರೂ ಕೂಡ ಉಳಿದ ರೈತರ ಹಾಗೆಯೇ ಕಿಸಾನ್ ಕ್ರೆಡಿಟ್ ಕಾರ್ಡ್‌ನ ಪ್ರಯೋಜನವನ್ನು ಪಡೆದುಕೊಂಡು, ಕರಾವಳಿಯ ಸಮುದಾಯದಲ್ಲಿ ಆರ್ಥಿಕ ಸಬಲತೆಯನ್ನು ಸಾಧಿಸಲು ಉಪಯುಕ್ತವಾಗಿದೆ.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಸಂಬಂಧಿಸಿದ ಪ್ರಮಾಣಪತ್ರಗಳು/ಮಂಜೂರುಗಳನ್ನು ಪ್ರಗತಿಪರ ಮೀನುಗಾರರಿಗೆ, ಪ್ರತ್ಯೇಕವಾಗಿ ಕರಾವಳಿ ಮೀನುಗಾರರು, ಯುವ ಮೀನುಗಾರಿಕಾ ಉದ್ಯಮಿಗಳಿಗೆ ನೀಡಲಾಯಿತು. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್, ಮೀನುಗಾರಿಕೆ ಮೂಲಭೂತಸೌಕರ್ಯ ನಿಧಿ, ರಾಜ್ಯ ಯೋಜನೆಗಳು, ಇ-ಶ್ರಮ ಇತ್ಯಾದಿಗಳ ಬಗ್ಗೆ ಮಾಹಿತಿ ಒದಗಿಸಲಾಯಿತು. ಸಾಗರ ಪರಿಕ್ರಮ III ನೇ ಹಂತದಲ್ಲಿ ಮೀನುಗಾರರಿಗೆ ತಮ್ಮಲ್ಲಿ ಕಂಡುಬರುವ ಕುಂದುಕೊರತೆ ಮತ್ತು ಆತಂಕಗಳನ್ನು ವ್ಯಕ್ತಪಡಿಸಲು ವೇದಿಕೆಯನ್ನು ಹಂಚಿಕೊಳ್ಲಲು ಅನುಮತಿ ನೀಡಲಾಯಿತು. ಭೇಟಿ ನೀಡಿದ ಪ್ರತಿಯೊಂದು ಸ್ಥಳದಲ್ಲಿ ಕರಾವಳಿ ಸಮುದಾಯಗಳು ಸಾಂಪ್ರದಾಯಿಕ ಜಾನಪದ ಪ್ರದರ್ಶನಗಳೊಂದಿಗೆ ಸ್ವಾಗತಿಸಿದರು. ಸುಮಾರು 12,500 ಮೀನುಗಾರರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಪ್ರಮುಖ ಮಾಹಿತಿ

  • ಕೇಂದ್ರ ಸರ್ಕಾರವು, 75 ವರ್ಷಗಳ ಸ್ವಾತಂತ್ರ್ಯವನ್ನು ಸಂದರ್ಭವಾಗಿ ‘ಸಾಗರ ಪರಿಕ್ರಮ’ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಯಿತು.
  • ಪ್ರಸ್ತುತ ಕಾರ್ಯಕ್ರಮವು ಪ್ರತ್ಯೇಕವಾಗಿ ಸಮುದ್ರ ಮೀನುಗಾರಿಕೆ ಸಂಪನ್ಮೂಲ ಹಾಗೂ ಸಮುದ್ರ ಪರಿಸರ ವ್ಯವಸ್ಥೆಗಳ ರಕ್ಷಣೆಯ ನಡುವಿನ ಸುಸ್ಥಿರ ಸಮತೋಲನವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.
  • ಮೀನುಗಾರಿಕಾ ಕ್ಷೇತ್ರಕ್ಕೆ ಪ್ರತ್ಯೇಕ ಸ್ಥಾನಮಾನವನ್ನು ನೀಡಲಾಗಿದೆ ಮತ್ತು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಆರಂಭಿಸಲು 20,000 ಕೋಟಿ ರೂಪಾಯಿಗಳ ಅನುದಾನದೊಂದಿಗೆ ಅನುಷ್ಠಾನಮಾಡಲಾಗಿದೆ.
  • ಮೀನುಗಾರರೂ ಕೂಡ ಉಳಿದ ರೈತರ ಹಾಗೆಯೇ ಕಿಸಾನ್ ಕ್ರೆಡಿಟ್ ಕಾರ್ಡ್‌ನ ಪ್ರಯೋಜನವನ್ನು ಪಡೆದುಕೊಂಡು

ತೀರ್ಮಾನ

ಸಾಗರ ಪರಿಕ್ರಮ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರದ ಮೀನುಗಾರಿಕೆ ಇಲಾಖೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದದಿಂದ ಅನುಷ್ಠಾನ ಮಾಡಲಾಗಿದ್ದು, ಸದರಿ ಯೋಜನೆಯು ದೇಶದ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಉದ್ದೇಶಕ್ಕಾಗಿ ಸಮುದ್ರ ಮೀನುಗಾರಿಕೆ ಸಂಪನ್ಮೂಲಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದ ಪ್ರಮುಖ ಉಪಕ್ರಮವಾಗಿದ್ದು, ಕರಾವಳಿಯಲ್ಲಿ ವಾಸಿಸುವ ಮೀನುಗಾರ ಸಮುದಾಯಗಳ ಜೀವನ ಸಾಗಿಸುವಲ್ಲಿ ಒಳಿತು ಸೃಷ್ಟಿಸಿದೆ. ಪ್ರಸ್ತುತ ಮುಕ್ತಾಯಗೊಂಡ ಸಾಗರ ಪರಿಕ್ರಮದ ಮೂರನೇ ಹಂತದಲ್ಲಿ ಸಾವಿರಾರು ಮೀನುಗಾರರು, ಉದ್ಯಮಿದಾರರು, ಪಾಲುದಾರರು, ವೃತ್ತಿಪರರು, ಅಧಿಕಾರಿಗಳು ಮತ್ತು ರಾಷ್ಟ್ರದಾದ್ಯಂತ ವಿಜ್ಞಾನಿಗಳು ಭಾಗವಹಿಸಿದ್ದರು. ಇವರು ಸರ್ಕಾರಿ ಅಧಿಕಾರಿಗಳು ಮತ್ತು ಗಣ್ಯರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಚರ್ಚಿಸಿದರು. ಸಾಗರ ಪರಿಕ್ರಮ ಕಾರ್ಯಕ್ರಮದ ಯಶಸ್ಸು ಸಮುದ್ರ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವದ ಪ್ರಾಮುಖ್ಯತೆ ಮತ್ತು ಅವುಗಳ ಸಂರಕ್ಷಣೆಗೆ ನಿರಂತರ ಪ್ರಯತ್ನಗಳ ಅಗತ್ಯವನ್ನು ತಿಳಿಸಿ ಹೇಳಿದೆ. 

 

Recent Posts

ಪ್ರಧಾನ ಮಂತ್ರಿಗಳ ಕೇಂದ್ರ ಪ್ರಾಯೋಜಿತ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು (PMFME) 2020 ರಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯ (MoFPI) ಪ್ರಾರಂಭಿಸಿದ ಒಂದು ಉಪಕ್ರಮವಾಗಿದೆ. ಈ ದೂರದೃಷ್ಟಿಯ ಯೋಜನೆಯನ್ನು…

July 17, 2024

ಸೈನಿಕ ಹುಳು: ಜೋಳದ ಬೆಳೆಯಲ್ಲಿ ವಿನಾಶಕಾರಿ ಕೀಟ

ಸಾಮಾನ್ಯವಾಗಿ ಸೈನಿಕ ಹುಳು ಎಂದು ಕರೆಯಲ್ಪಡುವ ಸ್ಪೋಡೋಪ್ಟೆರಾ ಫ್ರುಗಿಪರ್ಡಾ ಪ್ರಪಂಚದಾದ್ಯಂತದ ಬೆಳೆಗಳ ಮೇಲೆ ಹೆಚ್ಚು ಆಕ್ರಮಣಕಾರಿ ಕೀಟಗಳಲ್ಲಿ ಪ್ರಮುಖವಾಗಿದ್ದು, ಮುಖ್ಯ ಬೆಳೆಗಳಿಗೆ ತೀವ್ರ  ನಷ್ಟವನ್ನು ಉಂಟುಮಾಡುತ್ತದೆ. ಇದು…

July 11, 2024

ಮೆಕ್ಕೆಜೋಳ: ನಾಟಿ ಮತ್ತು ಸುಧಾರಿತ ಬೇಸಾಯ ಕ್ರಮಗಳು

ಮೆಕ್ಕೆ ಜೋಳ (ಜಿಯಾ ಮೇಸ್ ಎಲ್.) ಹೆಚ್ಚು ಹೊಂದಿಕೊಳ್ಳಬಲ್ಲ ಬೆಳೆಗಳಲ್ಲಿ ಒಂದಾಗಿದೆ, ಇದು ವ್ಯಾಪಕ ಶ್ರೇಣಿಯ ಕೃಷಿ-ಹವಾಮಾನ ಪರಿಸ್ಥಿತಿಗಳಲ್ಲಿ ಬೆಳೆಯಲು ಸಾಧ್ಯವಾಗುತ್ತದೆ. ಇದು ಎಲ್ಲಾ ಧಾನ್ಯಗಳಿಗಿಂತ ದೊಡ್ಡ…

June 28, 2024

ಸಮೃದ್ಧ ಕೊಯ್ಲಿಗೆ ಪಪ್ಪಾಯಿ ಕೃಷಿ ಪದ್ಧತಿಗಳು

ಪಪ್ಪಾಯಿ (ಕಾರಿಕಾ ಪಪ್ಪಾಯಿ) ಒಂದು ಉಷ್ಣವಲಯದ ಹಣ್ಣಾಗಿದ್ದು, ಅಡುಗೆಮನೆಯ ತೋಟಗಳಲ್ಲಿ ಬೆಳೆಯಲು ಸೂಕ್ತವಾಗಿದೆ. ಪಪ್ಪಾಯಿಯು ವಿಟಮಿನ್ ಸಿ, ವಿಟಮಿನ್ ಎ, ಖನಿಜಗಳು ಮತ್ತು ಪೊಟ್ಯಾಸಿಯಮ್ನಂತಹ ಪೋಷಕಾಂಶಗಳ ಸಮೃದ್ಧ…

June 24, 2024

ಸಾಫ್ಟ್ ರೊಟ್ ರೋಗ ಭೀತಿ: ಶುಂಠಿಯನ್ನು ವಿನಾಶದಿಂದ ರಕ್ಷಿಸುವುದು

ಶುಂಠಿಯು ಹೆಚ್ಚು ಬೇಡಿಕೆಯಿರುವ ಮಸಾಲೆ ಬೆಳೆಯಾಗಿದ್ದು, 2022 ರಲ್ಲಿ ಭಾರತವು ಸುಮಾರು 2.12 ಮಿಲಿಯನ್ ಮೆಟ್ರಿಕ್ ಟನ್‌ಗಳನ್ನು ಉತ್ಪಾದಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?  ಆದಾಗ್ಯೂ, ಸಾಫ್ಟ್ ರೊಟ್…

June 19, 2024

ಸೋಯಾಬೀನ್: ನಾಟಿ ಮತ್ತು ಕೃಷಿ ಅಭ್ಯಾಸಗಳು

ಹೆಚ್ಚಿನ ಪ್ರೊಟೀನ್ ಮತ್ತು ಎಣ್ಣೆಯ ಅಂಶದಿಂದಾಗಿ ಸೋಯಾಬೀನ್ ಅನ್ನು ಗೋಲ್ಡನ್ ಬೀನ್ ಅಥವಾ ಮಿರಾಕಲ್ ಕ್ರಾಪ್ ಎಂದೂ ಕರೆಯಲಾಗುತ್ತದೆ. ಸೋಯಾಬೀನ್ ಚೀನಾದಲ್ಲಿ ಹುಟ್ಟಿಕೊಂಡ ದ್ವಿದಳ ಧಾನ್ಯದ ವಿಧ.…

June 17, 2024